ಜಿಲ್ಲಾ ಸುದ್ದಿ

ಆನವೇರಿ, ಹರಮಘಟ್ಟದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಬೃಹತ್‌ ಸಾರ್ವಜನಿಕ ಸಭೆ

ಶಿವಮೊಗ್ಗ: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಚುನಾವಣಾ ಪ್ರಚಾರ ನಡೆಸಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ 10.30ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆನವೇರಿಯ ಹಾಲೇಶಪ್ಪ ಅವರ ಮನೆ ಆವರಣದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿಸುವಂತೆ ಪ್ರಚಾರ ಕಾರ್ಯ ನಡೆಸಿದರು.

ಏ.24ರ ಮಧ್ಯಾಹ್ನ 12.30ಕ್ಕೆ ಹರಮಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತ ನಾಡಿದರು.

ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆನವೇರಿ, ಹರ ಮಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಯನ್ನು ಮತ್ತೊಮ್ಮೆ ಗೆಲ್ಲಿಸಬೇಕು ಎಂದು ಶಾಸಕ ಕೆ.ಬಿ. ಅಶೋಕ ನಾಯ್ಕ ತಿಳಿಸಿದ್ದಾರೆ.