ಶಿವಮೊಗ್ಗಶಿವಮೊಗ್ಗ ನಗರ

ಶಿವಮೊಗ್ಗ: ವಕೀಲರಿಂದ ಬೃಹತ್‌ ಪ್ರತಿಭಟನೆ

ಶಿವಮೊಗ್ಗ: ಚಿಕ್ಕಮಗಳೂರಿ ನಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗ ವಕೀಲರ ಸಂಘದ ನೇತೃತ್ವದಲ್ಲಿ ನೂರಾರು ವಕೀಲರು ಕಲಾಪದಿಂದ ಹೊರ ಗುಳಿದು ಬೃಹತ್‌ ಪ್ರತಿಭಟನೆ ನಡೆಸಿದರು.
ಕೋರ್ಟ್‌ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಬಾಲರಾಜ ಅರಸ್‌ ರಸ್ತೆ ಮೂಲಕ ಸೀನಪ್ಪ ಶೆಟ್ಟಿ ವೃತ್ತ, ಅಮೀರ್‌ ಅಹ್ಮದ್‌ ವೃತದವರೆಗೆ ಹೋಗಿ ವಾಪಸ್‌ ಶೀನಪ್ಪ ಶೆಟ್ಟಿ ವೃತ್ತಕ್ಕೆ ಬಂದು ಮಾನವ ಸರಪಳಿ ರಚಿಸಿ ಸುಮಾರು 3ಗಂಟೆಗಳ ಕಾಲ ಪ್ರತಿಭಟನಾ ಸಭೆ ನಡೆಸಿದರು.
ವಕೀಲರ ಪ್ರತಿಭಟನೆ ಹಿನ್ನಲೆ ಯಲ್ಲಿ ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿ ಪೊಲೀಸ್‌ ಬಂದೋಬಸ್‌್ತ ಕೈಗೊಳ್ಳ ಲಾಗಿತ್ತು.
ಶೀನಪ್ಪ ಶೆಟ್ಟಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಕೀಲರು, ತಮ್ಮ ಮನವಿ ಸ್ವೀಕರಿ ಸಲು ಸ್ಥಳಕ್ಕೆ ಜಿಲ್ಲಾಽ ಕಾರಿ, ಜಿಲ್ಲಾ ರಕ್ಷಣಾಽ ಕಾರಿಗಳೇ ಬರಬೇಕು ಎಂದು ಪಟ್ಟು ಹಿಡಿದರು.
ಸ್ಥಳಕ್ಕೆ ತಹಶೀಲ್ದಾರ್‌, ಡಿವೈಎಸ್ಪಿ, ಹೆಚ್ಚುವರಿ ಜಿಲ್ಲಾಽ ಕಾರಿ ಬಂದರೂ ಕೂಡ ಅದನ್ನು ಒಪ್ಪದೇ ಜಿಲ್ಲಾಽ ಕಾರಿಗಳೇ ಬರಬೇಕು ಎಂದು ಪ್ರತಿಭಟ ನಾಕಾರರು ಪಟ್ಟು ಹಿಡಿದರು. ಈ ಮಧ್ಯೆ ವಕೀಲರು ಮತ್ತು ಅಽ ಕಾರಿಗಳ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿ ದ್ದಂತೆಯೇ ಜಿಲ್ಲಾ ರಕ್ಷಣಾಽ ಕಾರಿ ಮತ್ತು ಜಿಲ್ಲಾಽ ಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ವಕೀಲರು ಪ್ರತಿಭಟನೆ ಹಿಂಪಡೆದರು.
ಕ್ರಮಕ್ಕೆ ಆಗ್ರಹ: ಚಿಕ್ಕಮಗಳೂರಿನಲ್ಲಿ ನಿನ್ನೆ ವಕೀಲರ ಸಂಘದ ಸದಸ್ಯ ಪ್ರೀತಂ ಅವರು ಹೆಲ್ಮೆಟ್‌ ಧರಿಸಿಲ್ಲ ಎಂಬ ಕಾರಣಕ್ಕೆ ಅಲ್ಲಿನ ನಗರದ ಪೊಲೀಸ್‌ ಇನ್‌್ಸ ಪೆಕ್ಟರ್‌ ಮತ್ತು ಸಿಬ್ಬಂದಿ ಪ್ರೀತಂ ಅವರನ್ನು ಠಾಣೆಗೆ ಎಳೆದುಕೊಂಡು ಹೋಗಿ ಲಾಠಿ, ದೊಣ್ಣೆಯಿಂದ ಥಳಿಸಿ, ಶೂ ಕಾಲಿನಿಂದ ಹಲ್ಲೆ ನಡೆಸಿದ್ದಾರೆ. ಇದು ಮಾರಣಾಂತಿಕ ಹಲ್ಲೆಯಾಗಿದೆ. ಕೊಲೆ ಪ್ರಕರಣ ವನ್ನು ಪೊಲೀಸರ ಮೇಲೆ ದಾಖಲಿ ಸಬೇಕು. ಹಾಗೂ ಅವರನ್ನು ಸೇವೆಯಿಂದ ವಜಾಗೊಳಿಸಬೇಕು. ಅಮಾನತು ಮಾಡಿದರೆ ಸಾಲದು ತಕ್ಷಣ ಅವರನ್ನು ಬಂಽಸಬೇಕು ಎಂದು ವಕೀಲರು ಆಗ್ರಹಿಸಿದರು.
ಹೀಗೆ ಪದೇ ಪದೇ ವಕೀಲರ ಮೇಲೆ ಹಲ್ಲೆ ನಡೆಯುತ್ತಿರುವುದು ಖಂಡನೀಯ. ವಕೀಲರ ರಕ್ಷಣಾ ಕಾಯ್ದೆಯನ್ನು ಸರ್ಕಾರ ತಕ್ಷಣ ಜಾರಿಗೊಳಿಸಬೇಕು. ಮತ್ತು ವಕೀಲರ ಮೇಲೆ ಹಲ್ಲೆ ನಡೆಯ ದಂತೆ ತಡೆಯುವ ಸಂಬಂಧ ಎಲ್ಲಾ ಪೊಲೀಸ್‌ ಠಾಣೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಬಿ.ಜಿ. ಶಿವ ಮೂರ್ತಿ, ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ, ಉಪಾಧ್ಯಕ್ಷ ಟಿ.ಎಸ್‌. ಟೇಕೋಜಿರಾವ್‌, ಪ್ರಮುಖರಾದ ಕೆ.ಪಿ. ಶ್ರೀಪಾಲ್‌, ಗಿರೀಶ್‌ ಎಸ್‌., ಮಹೇಂದ್ರ ಕುಮಾರ್‌, ಮಂಜು, ವೈ.ಬಿ. ಚಂದ್ರಕಾಂತ್‌, ಅಶೋಕ್‌, ವಿದ್ಯಾರಾಣಿ ಸೇರಿದಂತೆ ನೂರಾರು ಹಿರಿಯ-ಕಿರಿಯ ವಕೀಲರು ಪ್ರತಿಭಟನೆಯಲ್ಲಿ ಪಾಲ್ಗೊಂಡು ತಮ್ಮ ಆಕ್ರೋಶ ಹೊರಹಾಕಿದರು.