ಜಿಲ್ಲಾ ಸುದ್ದಿತಾಜಾ ಸುದ್ದಿ

ಹೆಚ್‌.ಸಿ. ಯೋಗೀಶ್‌ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹೆಚ್‌.ಸಿ. ಯೋಗೀಶ್‌ ತಮ್ಮ ಸಾವಿರಾರು ಬೆಂಬ ಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದು ಚುನಾವಣಾಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ರಾಮಣ್ಣ ಶ್ರೇಷ್ಠಿ ಪಾರ್ಕಿನ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಮ್ಮ ಅಪಾರ ಬೆಂಬಲಿಗ ರೊಂದಿಗೆ ದೇವಸ್ಥಾನದಿಂದ ಗಾಂಬಜಾರ್‌, ಶಿವಪ್ಪನಾಯಕ ಪುತ್ಥಳಿ, ನೆಹರು ರಸ್ತೆ, ಗೋಪಿ ಸರ್ಕಲ್‌, ಕಸ್ತೂರಬಾ ಕಾಲೇಜು ರಸ್ತೆ ಮೂಲಕ ಸಾಗಿ ಮಹಾನಗರ ಪಾಲಿಕೆಯಲ್ಲಿರುವ ಚುನಾವಣಾ ಅಕಾರಿಗಳಿಗೆ ನಾಮಪತ್ರ ಸಲ್ಲಿಸಿ ದರು.

ಈ ಸಂದರ್ಭದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್‌ ಗೆಲುವು ಖಚಿತವಾಗಿದೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ತನ್ನ ಪ್ರಣಾಳಿಕೆ ಯಲ್ಲಿ ಹಲವು ಗ್ಯಾರಂಟಿಗಳನ್ನು ಘೋಷಿಸಿದೆ. ಬಿಜೆಪಿ ಆಡಳಿತ ದಿಂದ ಜನತೆ ಬೇಸತ್ತಿದ್ದಾರೆ. ಹೊಸತನ ಬಯಸಿದ್ದಾರೆ. ಕಾರ್ಯ ಕರ್ತರು ಹೆಚ್ಚಿನ ಶ್ರಮ ವಹಿಸ ಲಿದ್ದಾರೆ. ಶಿವಮೊಗ್ಗ ನಗರವೂ ಸೇರಿದಂತೆ ಜಿಲ್ಲೆಯ ಏಳೂ ಕ್ಷೇತ್ರ ಗಳಲ್ಲೂ ಕಾಂಗ್ರೆಸ್‌ ಗೆಲ್ಲುತ್ತದೆ ಎಂದರು.