ಜಿಲ್ಲಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ಏ.18ಕ್ಕೆ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯಾಗಿ ಏ. 18ರಂದು ನಾಮಪತ್ರ ಸಲ್ಲಿಸುತ್ತಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಹೇಳಿದರು.

ಹೊಳೆಹೊನ್ನೂರು ಮಂಡಲ ವ್ಯಾಪ್ತಿಯ ಅರಹತೋಳಲು ಕೈಮರ ಗ್ರಾಮದಲ್ಲಿ ಆಯೋಜಿ ಸಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಏ.18ರ ಮಂಗಳವಾರ ಬೆಳಗ್ಗೆ 8.30ಕ್ಕೆ ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾವಿರಾರು ಕಾರ್ಯಕರ್ತರ ಆಶೀರ್ವಾದದೊಂದಿಗೆ ನಾಮ ಪತ್ರ ಸಲ್ಲಿಸಲಿದ್ದೇನೆ ಎಂದು ತಿಳಿಸಿ ದರು.

ಐದು ವರ್ಷಗಳಲ್ಲಿ ಗ್ರಾಮಾಂ ತರ ಕ್ಷೇತ್ರದ ಎಲ್ಲ ಗ್ರಾಮ ಪಂಚಾ ಯಿತಿ ವ್ಯಾಪ್ತಿಯಲ್ಲಿಯೂ ಅಭಿ ವೃದ್ಧಿ ಕಾಮಗಾರಿಗಳಿಗೆ ವಿಶೇಷ ಪ್ರಾಮುಖ್ಯತೆ ಕೊಟ್ಟು ಕೆಲಸ ಮಾಡಿದ್ದೇನೆ. ಎಲ್ಲರ ಬೆಂಬಲ ಹಾಗೂ ಆಶೀರ್ವಾದದಿಂದ ಬಿಜೆಪಿ ಮತ್ತೊಮ್ಮೆ ಗೆಲ್ಲಿಸಲು ಎಲ್ಲ ಕಾರ್ಯಕರ್ತರೂ ಒಟ್ಟಾಗಿ ಕೆಲಸ ಮಾಡಬೇಕಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಆಡಳಿತಕ್ಕೆ ತರಬೇಕಿದೆ ಎಂದರು.

ದೇವಕಾತಿಕೊಪ್ಪದ ಶ್ರೀ ಬಸವೇಶ್ವರ ಸ್ವಾಮಿ ಹಾಗೂ 51ನೇ ವರ್ಷದ ಶ್ರೀ ಆದಿಶಕ್ತಿ ಜಕಾತಮ್ಮ ದೇವಿಯ ಹಬ್ಬದ ಪ್ರಯುಕ್ತ ಶುಕ್ರವಾರದಂದು ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಅವರು ದೇವರ ದರ್ಶನ ಪಡೆದು ಆರ್ಶೀವಾದ ಪಡೆದರು. ನಂತರ ಹೊಳೆಹೊನ್ನೂರು, ಚಂದನಕೆರೆ ಭಾಗಗಳಲ್ಲಿ ಗ್ರಾಮದ ಪ್ರಮುಖ ರನ್ನು ಭೇಟಿ ಮಾಡಿ ಸಮಾಲೋ ಚನೆ ನಡೆಸಿದರು.

ಮುದುವಾಲ ಗ್ರಾಮದಲ್ಲಿ ್ರೆಂಡ್‌್ಸ ಸರ್ಕಲ್‌ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್‌. ಅಂ ಬೇಡ್ಕರ್‌ ಅವರ 132ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗ ವಹಿಸಿದ್ದ ಗ್ರಾಮಾಂತರ ಅಭ್ಯರ್ಥಿ ಕೆ.ಬಿ. ಅಶೋಕನಾಯ್ಕ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.

ಕ್ಷೇತ್ರ ಪ್ರಭಾರಿ ಎಸ್‌. ದತ್ತಾತ್ರಿ, ಬಿ.ಕೆ.ಶ್ರೀನಾಥ್‌, ಗ್ರಾಮಾಂತರ ಮಂಡಲ ರತ್ನಾಕರ ಶೆಣೈ, ಹೊಳೆ ಹೊನ್ನೂರು ಮಂಡಲ ಅಧ್ಯಕ್ಷ ಮಂಜುನಾಥ ಕಲ್ಲಜ್ಜನಾಳ್‌, ಗ್ರಾಮಾಂತರ ಪ್ರಧಾನ ಕಾರ್ಯ ದರ್ಶಿ ಗೋಪಾಲ್‌, ಗಿರೀಶ್‌, ಹೊಳೆಹೊನ್ನೂರು ಮಂಡಲ ಪ್ರಧಾನ ಕಾರ್ಯದರ್ಶಿ ಉಜ್ಜಿ ನಪ್ಪ, ಮಲ್ಲೇಶ್‌, ಪ್ರಮುಖರಾದ ಜಗದೀಶ್‌, ನಾಗರತ್ನ ಇದ್ದರು.