ಜಿಲ್ಲಾ ಸುದ್ದಿತಾಜಾ ಸುದ್ದಿ

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬಿಜೆಪಿಯೇ ಶಕ್ತಿ |ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಬಿಜೆ ಪಿಯೇ ಶಕ್ತಿ ಆಗಿದ್ದು, ಬಿಜೆಪಿ ಆಡಳಿತ ನಡೆಸಿದ ಅವಯಲ್ಲಿ ರಾಜ್ಯದ ಎಲ್ಲ ಗ್ರಾಮ ಪಂಚಾ ಯಿತಿ ವ್ಯಾಪ್ತಿಗಳಲ್ಲಿ ಕೋಟ್ಯಾಂತರ ರೂ. ಅನುದಾನ ನೀಡುವ ಮೂಲಕ ಅಭಿವೃದ್ಧಿ ಪಥದಲ್ಲಿ ಮುನ್ನಡೆದಿದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಹೇಳಿದರು.

ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೈದರ ಕಲ್ಲಹಳ್ಳಿಯಿಂದ ಚುನಾವಣೆ ಪ್ರಚಾರ ಆರಂಭಿಸಿ ಮಾತನಾಡಿ, ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯವಿರುವ ಮೂಲಸೌಕರ್ಯ, ರಸ್ತೆ, ಸಮುದಾಯ ಭವನ ಸೇರಿದಂತೆ ವಿವಿಧ ಕಾಮಗಾರಿ ಗಳಿಗೆ ಕೋಟಿ ರೂ.ಗೂ ಅಕ ಅನುದಾನ ಒದಗಿಸಲಾಗಿದೆ. ಅಭಿ ವೃದ್ಧಿಯೇ ನಮ್ಮ ಗೆಲುವಿಗೆ ಕಾರಣ ಆಗಲಿದೆ ಎಂದು ತಿಳಿಸಿದರು.

ಐದು ವರ್ಷಗಳ ಅವಯಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ ಗ್ರಾಮಾ ಂತರ ವಿಧಾನಸಭಾ ಕ್ಷೇತ್ರದ ಸಾವಿರಾರು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುತ್ತಿ ದ್ದಾರೆ. ಹಳ್ಳಿ ಹಳ್ಳಿಗಳಲ್ಲೂ ಆಯೋಜಿಸುತ್ತಿರುವ ಸಭೆಗಳಲ್ಲಿ ಬೇರೆ ಪಕ್ಷಗಳ ಕಾರ್ಯಕರ್ತರು ಹಾಗೂ ಮುಖಂಡರು ಪಕ್ಷಕ್ಕೆ ಸೇರುತ್ತಿರುವುದು ಮತ್ತಷ್ಟು ಶಕ್ತಿ ಹೆಚ್ಚಿಸಲಿದೆ ಎಂದರು.

ಪ್ರತಿಯೊಂದು ಗ್ರಾಮಗಳಲ್ಲಿ ಆಗಿರುವ ಕೆಲಸಗಳ ಬಗ್ಗೆ ಪಕ್ಷದ ಕಾರ್ಯಕರ್ತರು ಮನೆ ಮನೆಗ ಳಿಗೂ ತಲುಪಿಸುವ ಮೂಲಕ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಬೇಕು. ಶಿವಮೊಗ್ಗ ಗ್ರಾಮಾ ಂತರ ಕ್ಷೇತ್ರವು ಮಾಜಿ ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೆಚ್ಚಿನ ಕ್ಷೇತ್ರ ಆಗಿದ್ದು, ನೀರಾವರಿ ಯೋಜನೆ ಸೇರಿದಂತೆ ಎಲ್ಲ ಯೋಜನೆಗಳಿಗೂ ಹೆಚ್ಚಿನ ಅನುದಾನ ಒದಗಿಸಿದ್ದರು. ರಾಜ್ಯ ದಲ್ಲಿ ಬಿಜೆಪಿ ಅಕಾರಕ್ಕೆ ಬರುವ ನಿಟ್ಟಿನಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಗೆಲುವು ಕೂಡ ಮುಖ್ಯ ಎಂದು ಹೇಳಿದರು.

ಕ್ಷೇತ್ರ, ಜಿಲ್ಲೆ, ರಾಜ್ಯ ಹಾಗೂ ದೇಶದ ಹಿತದೃಷ್ಠಿಯಿಂದ ಬಿಜೆಪಿ ಪಕ್ಷ ಅತ್ಯಂತ ಅಗತ್ಯವಾಗಿದ್ದು, ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ದೇಶ ಐತಿಹಾಸಿಕ ಹಾಗೂ ಮಹತ್ವದ ಹೆಜ್ಜೆಗಳನ್ನು ಇಡು ತ್ತಿದ್ದು, ದೇಶ ಸದೃಢವಾಗಿ ರೂಪು ಗೊಳ್ಳುತ್ತಿದೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕೈಗೊಂಡ ಕ್ರಾಂತಿ ಕಾರಿ ನಿರ್ಣಯಗಳಿಂದ ಬಿಜೆಪಿ ಬಲ ಮತ್ತಷ್ಟು ಹೆಚ್ಚಿದೆ. 2023ರ ಚುನಾವಣೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಗೆಲ್ಲಿಸಬೇಕು ಎಂದರು.

ಸೈದರ ಕಲ್ಲಹಳ್ಳಿ ಗ್ರಾಮದಲ್ಲಿ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಪಕದ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ಮಂಡಲ ಅಧ್ಯಕ್ಷ ಮಂಜುನಾಥ ಕಲ್ಲಜ್ಜನಾಳ್‌, ವಿರೂಪಾಕ್ಷಪ್ಪ, ಸದಾಶಿವಪ್ಪ, ಜಗದೀಶ್‌ ಗೌಡ, ಮಲ್ಲೇಶ್‌, ಷಡಾಕ್ಷರಪ್ಪ, ಸುಬ್ರಹ್ಮಣ್ಯ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯ್ಲಯದಲ್ಲಿ ಪ್ರಮುಖರ ಸಭೆ ನಡೆಸಲಾಯಿತು. ಕ್ಷೇತ್ರ ಪ್ರಭಾರಿ ಎಸ್‌.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಪ್ರಧಾನ ಕಾರ್ಯದರ್ಶಿ ಗೋಪಾಲ್‌, ಉಜ್ಜಿನಪ್ಪ, ಮಲ್ಲೇಶ್‌, ರಂಗೋ ಜಿರಾವ್‌ ಸೇರಿದಂತೆ ಪ್ರಮುಖರು ಸಭೆ ನಡೆಸಿದರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೈದರಕಲ್ಲಹಳ್ಳಿ, ದಿಗ್ಗೇನಹಳ್ಳಿ, ಆದ್ರಿಹಳ್ಳಿ, ಅರಸನಘಟ್ಟ ತಾಂಡಾ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದರು. ಗ್ರಾಮಾಂತರ ವ್ಯಾಪ್ತಿಯ ಕುರುಬರ ವಿಠಲಪುರ, ನಿಂಬೆಗೊಂದಿ, ವಡೇರಪುರ, ಆನವೇರಿ, ಇಟ್ಟಿಗೆಹಳ್ಳಿ, ಮಂ ಗೋಟೆ, ನಾಗಸಮುದ್ರ ಸೇರಿ ದಂತೆ ವಿವಿಧೆಡೆಗಳಲ್ಲಿ ಪ್ರವಾಸ ಹಮ್ಮಿಕೊಳ್ಳಲಾಗಿತ್ತು.