ಜಿಲ್ಲಾ ಸುದ್ದಿ

ಬಿಜೆಪಿ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕರಿಗೆ ಕ್ಷೇತ್ರದ ಜನರಿಂದ ದೇಣಿಗೆ ನಿಂಬೆಗೊಂದಿ, ಆನವೇರಿ ಗ್ರಾಮಸ್ಥರಿಂದ ತಲಾ 25,000 ರೂ. ದೇಣಿಗೆ

ಶಿವಮೊಗ್ಗ: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಅವರಿಗೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಪಾರ ಜನ ಬೆಂಬಲ ವ್ಯಕ್ತವಾಗುತ್ತಿದ್ದು, ವಿವಿ ಧೆಡೆ ಗ್ರಾಮಸ್ಥರು ಸೇರಿ ಅಭ್ಯ ರ್ಥಿಯ ಚುನಾವಣಾ ವೆಚ್ಚಕ್ಕಾಗಿ ದೇಣಿಗೆ ನೀಡುತ್ತಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ನಡೆಸುತ್ತಿರುವ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕನಾಯ್‌ ಅವರಿಗೆ ಚುನಾವಣಾ ವೆಚ್ಚಕ್ಕಾಗಿ ನಿಂಬೆ ಗೊಂದಿ ಹಾಗೂ ಆನವೇರಿಯಲ್ಲಿ ಗ್ರಾಮಸ್ಥರು ತಲಾ 25,000 ರೂ. ದೇಣಿಗೆ ನೀಡಿದರು. ಅರಸನ ಘಟ್ಟ ತಾಂಡಾ, ಕುರುಬರ ವಿಠಲಪುರ, ವಡೇರಪುರ, ನಿಂಬೆಗೊಂದಿ, ಇಟ್ಟಿಗೆಹಳ್ಳಿ ಹಾಗೂ ಆನವೇರಿ ವ್ಯಾಪ್ತಿಯಲ್ಲಿ ಭೇಟಿ ಮಾಡಿ ಗ್ರಾಮಸ್ಥರಲ್ಲಿ ಮತಯಾಚನೆ ಮಾಡಿದರು.

ಗ್ರಾಮಾಂತರ ಕ್ಷೇತ್ರವ್ಯಾಪ್ತಿಯ ಗ್ರಾಮಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ಬಾರಿಯು ಬಿಜೆಪಿಯೇ ಗೆಲ್ಲಲಿದೆ. ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಸುವಂತಾಗಲಿ ಎಂದು ಎಲ್ಲ ಗ್ರಾಮಗಳ ಮುಖಂಡರು ಶುಭಕೋರಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ ಅವರು ಕುಂಸಿ ಹಾಗೂ ಆಯನೂರು ಭಾಗಗಳಲ್ಲಿ ಪ್ರಚಾರ ಕಾರ್ಯ ನಡೆಸಿದರು. ಚಿಕ್ಕಮರಸ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದರು.

ಬಾಳೆಕೊಪ್ಪ ಹಾಗೂ ಹುಬ್ಬನಹಳ್ಳಿ ಗ್ರಾಮದ ರಸ್ತೆಗಳಲ್ಲಿ ಮನೆ ಮನೆಗಳಿಗೂ ಭೇಟಿ ನೀಡಿ ಮತಯಾಚನೆ ನಡೆಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚಿನ ಅನುದಾನ ನೀಡಿರುವ ಪರಿಣಾಮ ರಸ್ತೆಗಳನ್ನು ಮಾಡಲಾಗಿದೆ. ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ ಮಾತನಾಡಿ, ಹೊಸದಾಗಿ ರ್ಸ್ಪಸಿದ್ದ ನನಗೆ ಗೆಲುವು ನೀಡಿದ್ದ ರಿಂದ ಗ್ರಾಮಾಂತರ ಕ್ಷೇತ್ರದಲ್ಲಿ ಮಹತ್ತರ ಅಭಿವೃದ್ಧಿ ಕೆಲಸಗಳು ಮಾಡಲು ಸಾಧ್ಯವಾಯಿತು. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹಾಗೂ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರ ನಾಯಕತ್ವದಲ್ಲಿ ಗ್ರಾಮಾಂತರ ಕ್ಷೇತ್ರ ಅಭಿವೃದ್ಧಿಯಾಗಿದೆ.

ಮತ್ತೊಮ್ಮೆ ಬಿಜೆಪಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಗಳ ಕುರಿತು ಶಿವಮೊಗ್ಗ ಕಾರ್ಯ್ಲಯದಲ್ಲಿ ಕ್ಷೇತ್ರ ಪ್ರಭಾರಿ ಎಸ್‌.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜು ನಾಥ್‌ ಕಲ್ಲಜ್ಜನಾಳ್‌, ಪ್ರಧಾನ ಕಾರ್ಯದರ್ಶಿ ಗೋಪಾಲ್‌, ಉಜ್ಜಿನಪ್ಪ, ಮಲ್ಲೇಶ್‌, ಸ್ವರೂಪ್‌, ರಂಗೋಜಿರಾವ್‌ ಸೇರಿದಂತೆ ಪ್ರಮುಖರು ಸಭೆ ನಡೆಸಿದರು.

ಗುರುವಾರ ಮತ್ತು ಶುಕ್ರವಾರ ವಿವಿಧೆಡೆಗಳಲ್ಲಿ ನಡೆದ ಪ್ರಚಾರ ಕಾರ್ಯದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಪಕ್ಷದ ಪ್ರಮುಖರು, ಮಹಾಶಕ್ತಿ ಕೇಂದ್ರದ ಪ್ರಮುಖರು, ಗ್ರಾಮದ ಮುಖಂಡರು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು