ಜಿಲ್ಲಾ ಸುದ್ದಿತಾಜಾ ಸುದ್ದಿ

ಕೊನೆಯ ಕ್ಷಣದಲ್ಲಿ ಟಿಕೆಟ್‌ ಗಿಟ್ಟಿಸಿಕೊಂಡ ಚೆನ್ನಿ

ಶಿವಮೊಗ: ಕೊನೆಯ ಕ್ಷಣ ದಲ್ಲಿ ಟಿಕೆಟ್‌ ಗಿಟ್ಟಿಸಿಕೊಂಡ ಎಸ್‌. ಎನ್‌. ಚನ್ನಬಸಪ್ಪ (ಚೆನ್ನಿ)  ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾವಿರಾರು ಸಂಖ್ಯೆಯಲ್ಲಿದ್ದ ಬೆಂಬಲಿಗರು  ಹಾಗೂ ಕಾರ್ಯ ಕರ್ತರ ಜೊತೆಗೆ ಮೆರವಣಿಗೆಯಲ್ಲಿ ಸಾಗಿದರು. ಘೋಷಣೆಗಳನ್ನು ಕೂಗುತ್ತಾ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.

ಇದಕ್ಕೂ ಮುನ್ನ ಅವರು ತಮ್ಮ ನಾಯಕ ಕೆ.ಎಸ್‌. ಈಶ್ವರಪ್ಪನವರ ಮನೆಗೆ ತೆರಳಿ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆ ದರು. ಚೆನ್ನಬಸಪ್ಪ ಅವರನ್ನು ಪ್ರೀತಿಯಿಂದ ತಬ್ಬಿ ನೀನು ಗೆದ್ದೇ ಗೆಲ್ಲುತ್ತೀಯಾ ಯಾವ ಆತಂಕವೂ ಬೇಡ ಎಂದು ಈಶ್ವರಪ್ಪ ವಿಶ್ವಾಸ ತುಂಬಿದರು.

ನಂತರಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದೇ ಬರುತ್ತದೆ. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸು ವುದೇ ನಮ್ಮ ಗುರಿಯಾಗಿದೆ. ಬಿಜೆಪಿಯಲ್ಲಿ ಕಾರ್ಯಕರ್ತರು, ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದರು.

ಶಿವಮೊಗ್ಗದಲ್ಲಿ ಈ ಬಾರಿ ತ್ರಿಕೋನಸ್ಪರ್ಧೆ ಆಗುವ ಎಲ್ಲಾ ಲಕ್ಷಣಗಳಿವೆ. ಕಳೆದ ಬಾರಿ 46ಸಾವಿರ ಮತಗಳ ಅಂತರದಿಂದ ಗೆದ್ದೆವು. ಈ ಬಾರಿ 60ಸಾವಿರ ಕ್ಕೂ ಹೆಚ್ಚಿನ ಅಂತರದಿಂದ ಗೆಲ್ಲುತ್ತೇವೆ. ನಾನು ರಾಜ್ಯಾದ್ಯಂತ ಚುನಾವಣಾ ಪ್ರಚಾರದಲ್ಲಿ ತೊಡಗಬೇಕಾಗಿದೆ. ಶಿವಮೊಗ್ಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಅಭ್ಯರ್ಥಿ ಎಸ್‌.ಎನ್‌. ಚನ್ನಬಸಪ್ಪ ಮಾತನಾಡಿ, ಹಿರಿಯರಾದ ಈಶ್ಪರಪ್ಪನವರ ಮಾರ್ಗದರ್ಶನದಲ್ಲಿಯೇ ಈ ಚುನಾವಣೆಯನ್ನು ನಡೆಸುತ್ತೇನೆ. ಕಾರ್ಯಕರ್ತರೆಲ್ಲ ಉತ್ಸಾಹದಿಂದ ಇದ್ದಾರೆ. ಈಶ್ವರಪ್ಪನವರಿಗೆ ಹೇಗೆ ಗೆಲ್ಲಬೇಕೆಂಬುದು ಕರಗತವಾಗಿದೆ. ಅವರ ಹಾದಿಯಲ್ಲೆ ಸಾಗುತ್ತೇನೆ. ಸುಮಾರು 60 ಸಾವಿರ ಮತಗಳ ಅಂತರದಿಂದ ಗೆದ್ದೇ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ  ನಾಮಪತ್ರ ಸಲ್ಲಿ ಸುವ ಸಂದ ರ್ಭದಲ್ಲಿ  ಕೆ.ಎಸ್‌. ಈಶ್ವರಪ್ಪ, ಡಿ. ಎಸ್‌.ಅರುಣ್‌,  ಮೇಘರಾಜ್‌, ಮುರುಳೀದರ್‌ ಇನ್ನಿತರರಿದ್ದರು.