ಜಿಲ್ಲಾ ಸುದ್ದಿ

ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಗೆ ಅಪಾರ ಜನಬೆಂಬಲ :ಕೆ.ಬಿ.ಅಶೋಕನಾಯ್ಕ

ಶಿವಮೊಗ್ಗ: ಬಿಜೆಪಿ ಸರ್ಕಾ ರದ ಅವಯ ಪರಿಣಾಮಕಾರಿ ಯೋಜನೆಗಳಿಂದ ಗ್ರಾಮ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯ ನಡೆದಿದ್ದು, ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲೂ ಬಿಜೆಪಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಹೇಳಿದರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವ್ಯಾಪ್ತಿಯ ಹರಿಗೆ, ಹಾಥಿ ನಗರ, ಯಲವಟ್ಟಿ ಕ್ಯಾಂಪ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಪ್ರಚಾರ ಸಭೆ ಹಾಗೂ ಮನೆ ಮನೆಗಳಿಗೆ ಭೇಟಿ ನೀಡಿ ಬಿಜೆಪಿ ಗೆಲ್ಲಿಸುವಂತೆ ಮನವಿ ಮಾಡಿ ದರು. ಬಿಜೆಪಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದರು.

ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲೂ ಕೋಟಿ ರೂ.ಗೂ ಅಕ ಅನುದಾನ ಉಪ ಯೋಗಿಸಿ ಅಭಿವೃದ್ಧಿ ಕೆಲಸಗಳನ್ನು ನಡೆಸಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನು ಅಕಾರಕ್ಕೆ ತರ ಬೇಕು. ರಾಜ್ಯದಲ್ಲಿ ಮಾದರಿ ಗ್ರಾಮಗಳ ನಿರ್ಮಾಣಕ್ಕೆ ಬಿಜೆಪಿ ಯೇ ಭರವಸೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಅಕಾರಕ್ಕೆ ಬರಬೇಕು ಎಂದು ತಿಳಿಸಿದರು.

ದೇಶದ ಸುರಕ್ಷತೆ ಹಾಗೂ ಹಿತದೃಷ್ಠಿಯಿಂದ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಹತ್ತರ ಕೆಲಸಗಳನ್ನು ಮಾಡುತ್ತಿದೆ. ದೇಶ ದಲ್ಲಿ ಉತ್ತಮ ಆಡಳಿತ ನಡೆಸುವ ಸದೃಢ ರಾಷ್ಟ್ರ ನಿರ್ಮಾಣ ಆಗಿದೆ. ನರೇಂದ್ರ ಮೋದಿ ನಾಯಕತ್ವಕ್ಕೆ ವಿಶ್ವಾದ್ಯಂತ ಮೆಚ್ಚುಗೆ ವ್ಯಕ್ತವಾ ಗುತ್ತಿದೆ. ಡಬಲ್‌ ಇಂಜಿನ್‌ ಸರ್ಕಾ ರದ ಕೊಡುಗೆಯು ರಾಜ್ಯದಲ್ಲಿ ಲಕ್ಷಾಂತರ ಕೋಟಿ ರೂ. ವೆಚ್ಚದ ಅಭಿವೃದ್ಧಿ ಕೆಲಸಗಳು ಆಗಿವೆ ಎಂದರು.

ಪ್ರಮುಖರಾದ ವೀರೂಪಾ ಕ್ಷಪ್ಪ, ಸ್ಥಳೀಯ ಬಿಜೆಪಿ ಮುಖಂ ಡರು ಹಾಗೂ ಹರಿಗೆ, ಹಾಥಿನ ಗರ, ಯಲವಟ್ಟಿ ಕ್ಯಾಂಪ್‌ನ ಸ್ಥಳೀಯರು ಹಾಜರಿದ್ದರು. ಕ್ಷೇತ್ರ ಪ್ರಭಾರಿ ಎಸ್‌.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಮಂಜುನಾಥ ಕಲ್ಲಜ್ಜನಾಳ್‌, ಸ್ವರೂಪ್‌ ಸೇರಿದಂತೆ ಪಕ್ಷದ ವಿವಿಧ ಸಮಿತಿ ಮುಖಂಡರು, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯಕರ್ತರು ಚುನಾವಣಾ ಕಾರ್ಯ್ಲಯದಲ್ಲಿ ಸಭೆ ನಡೆಸಿದರು.