ಶಿವಮೊಗ್ಗಶಿವಮೊಗ್ಗ ನಗರ

ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಆಗ್ರಹಿಸಿ ಪ್ರತಿಭಟನೆ – ಮನವಿ

ಶಿವಮೊಗ್ಗ: ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಯನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಾರಸು ಮಾಡಬೇಕು ಎಂದು ಆಗ್ರಹಿಸಿ ಮಂಗಳವಾರ ಸಾಮಾ ಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿ ಗಳ ಒಳಮೀಸಲಾತಿ ಜಾರಿ ಹೋ ರಾಟ ಸಮಿತಿ ಜಿಲ್ಲಾಕಾರಿಗಳ ಕಚೇರಿ ಅವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಪರಿಶಿಷ್ಟ ಜಾತಿಗಳ ಒಳಮೀ ಸಲಾತಿಗಾಗಿ ಹಲವು ವರ್ಷಗಳಿ ಂದ ನಾವು ಹೋರಾಟ ಮಾಡುತ್ತಾ ಬಂದಿದ್ದೇವೆ. ಆದರೂ ನಮ್ಮ ಬೇಡಿಕೆಗಳು ಈಡೇರಲಿಲ್ಲ. ಈಗ ಚುನಾವಣೆಯ ಸಮಯ. ನೀತಿಸಂಹಿತೆ ಜಾರಿಯಾಗುವ ಮುನ್ನವೇ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಸ್ವೀಕ ರಿಸಿ ಕೇಂದ್ರಕ್ಕೆ ಶಿಾರಸು ಮಾಡ ಬೇಕು ಎಂದು ಪ್ರತಿಭಟನಕಾರರು ತಿಳಿಸಿದರು.

ಕೇಂದ್ರ ಸರ್ಕಾರ ಅನುಚ್ಛೇದ 341(3)ಕ್ಕೆ ತಿದ್ದುಪಡಿ ತರಬೇಕು ಪರಿಶಿಷ್ಟ ಜಾತಿಗಳಲ್ಲಿನ ತ್ರಿಮತಸ್ಥ ಚರ್ಮಗಾರ, ಸಮುದಾಯಗಳಿಗೆ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ಹಿಂದುಳಿದ ವರ್ಗಗಳ ಕಾಂತರಾಜ ವರದಿಯನ್ನು ಬಹಿರಂಗ ಮಾಡಿ ಯಥಾವತ್ತಾಗಿ ಜಾರಿ ಮಾಡ ಬೇಕು. ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಗಳಲ್ಲಿ ಬಹುಸಂಖ್ಯಾತರಾಗಿರುವ ಮಾದಿಗ ದಂಡೋರ ಛಲವಾದಿ ಗಳ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿರುವ 43 ಸಾವಿರ ಪೌರ ಕಾರ್ಮಿಕರು ಮತ್ತು ವಾಹನ ಚಾಲಕರನ್ನು ಖಾಯಂಗೊಳಿಸಬೇಕು. ಪರಿಶಿಷ್ಟ ಜಾತಿಗಳ ಉಪ ಹಂಚಿಕೆಯನ್ನು ಸರಿಯಾಗಿ ಹಂಚಿಕೆ ಮಾಡಬೇಕು. ಅನುದಾನ ದುರುಪಯೋಗ ಆಗದಂತೆ ತಡೆಗಟ್ಟಬೇಕು. ಮುಖ್ಯವಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಜಾರಿ ಮಾಡಬೇಕು. ಇಲ್ಲದಿದ್ದರೆ ಖುರ್ಚಿ ಖಾಲಿ ಮಾಡಿಕೊಂಡು ಹೋಗಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ಪ್ರತಿಭಟನೆಯಲ್ಲಿ ಪ್ರಮುಖ ರಾದ ಬಿ.ಎ. ಭಾನುಪ್ರಸಾದ್‌, ಹೆಚ್‌.ಎನ್‌. ಮಂಜುನಾಥ್‌, ನಿರಂಜನ್‌, ಚಂದ್ರಪ್ಪ, ಸುನಿಲ್‌, ಬಸವರಾಜ್‌, ನರಸಪ್ಪ ಸೇರಿದಂತೆ ಹಲವರಿದ್ದರು.