ಜಿಲ್ಲಾ ಸುದ್ದಿತಾಜಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ಕುಡಿಯುವ ನೀರು-ಜಾನುವಾರು ಮೇವಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಚಿವರ ಸೂಚನೆ

ಶಿವಮೊಗ್ಗ: ಮುಂಬರುವ ದಿನಗಳಲ್ಲಿ ತಾಲ್ಲೂಕಿನಲ್ಲಿ ಕುಡಿ ಯುವ ನೀರು ಹಾಗೂ ಜಾನು ವಾರು ಮೇವಿಗೆ ಯಾವುದೇ ರೀತಿ ಯಲ್ಲಿ ತೊಂದರೆಯಾಗದಂತೆ ಯೋಜನೆ ರೂಪಿಸಿ, ಕ್ರಮ ಕೈಗೊಳ್ಳಬೇಕೆಂದು ಅಽ ಕಾಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಮಧು ಬಂಗಾರಪ್ಪ ಸೂಚನೆ ನೀಡಿದರು.
ಸಾಗರದ ಐಬಿಯಲ್ಲಿ ಏರ್ಪಡಿಸಿಗಿದ್ದ ಸಾಗರ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರಗಾಲದ ಹಿನ್ನೆಲೆ ಜನರು ಸಂಕಷ್ಟದಲ್ಲಿದ್ದು ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಬೇಕು. ರಾಜ್ಯ ಸರ್ಕಾರ ಈ ಯೋಜನೆಯಡಿ ಮಾನವ ದಿನಗಳನ್ನು 19 ಕೋಟಿಗೆ ಹೆಚ್ಚಿ ಸಿದೆ. ಕಾರ್ಮಿಕರಿಗೆ ಕನಿಷ್ಟ 150 ಮಾನವ ದಿನಗಳನ್ನು ನೀಡಲಾಗು ವುದು. ಇದರಿಂದ ಅವರಿಗೆ ಆರ್ಥಿಕ ಸಹಕಾರ ದೊರಕಲಿದ್ದು ಅಗತ್ಯ ಇರುವವರಿಗೆ ಕೆಲಸ ನೀಡುವಂತೆ ಸಂಬಂಽಸಿದ ಪಿಡಿಓ /ಅಽ ಕಾರಿಗಳಿಗೆ ಸೂಚನೆ ನೀಡಿ ದರು.
ಸಾಗರ ಉಪವಿಭಾಗದ ಎಸಿ ಪಲ್ಲವಿ ಸಾತೇನಹಳ್ಳಿ ಮಾತನಾಡಿ, ತಾಲ್ಲೂಕಿನಲ್ಲಿ ಈ ಬಾರಿ ಶೇ.31 ಮಳೆ ಕೊರತೆ ಇದೆ. ಅಂತರ್ಜಲ ಮಟ್ಟು 6 ಮೀಟರ್‌ ನಿಂದ 13 ಮೀಟರ್‌ ಗೆ ಕುಸಿದಿದೆ. ಕೆರೆಗಳಲ್ಲಿ ಶೇ. 40 ರಿಂದ 50 ನೀರಿದೆ. ಜಾನುವಾರುಗಳಿಗೆ 29 ವಾರಗಳಿಗೆ ಅಂದರೆ 6 ತಿಂಗಳಿಗೆ ಆಗುವಷ್ಟು ಮೇವಿನ ಲಭ್ಯತೆ ಇದೆ. ಬಿತ್ತನೆ ಬೀಜಗಳಿಗೆ ಕೊರತೆ ಇಲ್ಲ. 4 ಗೋ ಶಾಲೆಗಳಿದ್ದು ಸರ್ಕಾರದಿಂದ 23 ಲಕ್ಷ ಅನುದಾನ ಬಿಡುಗಡೆ ಆಗಿದೆ.
12 ಸಾವಿರ ಹೆಕ್ಟೇರ್‌ ಪ್ರದೇಶ ದಲ್ಲಿ ಭತ್ತ ಹಾಗೂ 2, 200 ಹೆ. ಪ್ರದೇಶದಲ್ಲಿ ಮೆಕ್ಕೆ ಜೋಳ ಬಿತ್ತನೆಯಾಗಿದ್ದು, 10 ಸಾವಿರ ಹೆಕ್ಟೇರ್‌ ಭತ್ತ ಮತ್ತು 1723 ಹೆ. ಮೆಕ್ಕೆಜೋಳ ಹಾನಿಗೊಳಗಾಗಿದೆ.
ತಾಲ್ಲೂಕಿನಲ್ಲಿ 269 ಗ್ರಾಮ ಗಳಿದ್ದು 177 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಬಹುದಾಗಿದ್ದು, ನೀರಿನ ಸಮಸ್ಯೆ ಬಗೆಹರಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ನಗರ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದರು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಮಾತನಾಡಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯು ಕಸಬ, ಆವಿನಹಳ್ಳಿ ಹೋಬ ಳಿಯಲ್ಲಿ 8 ತಿಂಗಳಿನಿಂದ ಜಾರಿಯ ಲ್ಲಿದೆ. ಆನಂದಪುರ, ತಾಳಗುಪ್ಪ ಹೋಬಳಿಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಎಂ.ವಿ.ಎಸ್‌. ಹಾಗೂ ಬೋರ್‌ ಯಶಸ್ವಿಯಾಗದ ಕೆಲ ಗ್ರಾಮಗಳಲ್ಲಿ ಕೆರೆ ನೀರಿಗೆ ಜಾಕ್ವೆಲ್‌ ನಿರ್ಮಿಸಿದರೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎಂದರು.
ಸಚಿವರು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು. ಸಮಸ್ಯಾತ್ಮಕ ಗ್ರಾಮಗಳಿಗೆ ಖಾಸಗಿ ಬೋರ್ವೆಲ್‌ ಮೂಲಕ ನೀರು ನೀಡಲು ಈಗಿನಿಂದಲೇ ತಯಾರಿ ಮಾಡಿ ಕೊಳ್ಳಬೇಕು.
ಅನಿವಾರ್ಯವಾ ದರೆ ಮಾತ್ರ ಟ್ಯಾಂಕರ್‌ ಮೂಲಕ ನೀರು ನೀಡಲು ವ್ಯವಸ್ಥೆ ಮಾಡ ಬೇಕು. ಎಲ್ಲ ಪಿಡಿಓ ಗಳು ತುತಾ ರ್ಗಿ ತಮ್ಮ ವ್ಯಾಪ್ತಿಯ ವಾಸ್ತವತೆ ಅರಿತು ವರದಿ ನೀಡಬೇಕು.
ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ವಹಿಸಲು ಕ್ರಿಯಾ ಯೋಜನೆ ಸಿದ್ದಪಡಿಸಿಕೊಳ್ಳಬೇಕೆಂದರು.
ಮೆಸ್ಕಾಂನವರು ಟ್ರಾನ್‌್ಸ ಮಿಟರ್‌ ಸುಟ್ಟು ಹೋಗಿ ರುವುದು ಸೇರಿದಂತೆ ವಿದ್ಯುತ್‌ ವ್ಯತ್ಯಯಗಳ ದೂರು ಬಂದ ತಕ್ಷಣ ಸೂಕ್ತ ಕ್ರಮ ವಹಿಸಬೇಕು. ಹಾಗೂ ಪಿಡಿಓ ಗಳು ಸಹ ಶೀಘ್ರವಾಗಿ ಸ್ಪಂದಿಸ ಬೇಕೆಂದು ಸೂಚಿಸಿದರು.
ಇದೇ ವೇಳೆ ನರೇಗಾದಡಿ ಬಿಟ್ಟುಹೋಗಿರುವ ಕಾಲುಸಂಕ ಮತ್ತು ಜಾನುವಾರು ತೊಟ್ಟಿಗಳ ಕಾಮಗಾರಿಗಳನ್ನು ಸೇರಿಸುವಂತೆ ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.
ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಸುಜಾತಾ, ತಾ. ಪಂ. ಇಓ ನಾಗೇಶ್‌ ಬಾಲ್ಯಾಳ್‌, ತಹಶೀಲ್ದಾರ್‌ ಚಂದ್ರಶೇಖರ್‌, ಇತರೆ ಅಽ ಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.