ಜಿಲ್ಲಾ ಸುದ್ದಿತಾಜಾ ಸುದ್ದಿ

ಜೆಡಿಎಸ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚು ಸ್ಥಾನಮಾನ ಸಿಗುತ್ತಿದೆ: ಸೈಯದ್‌ ಜಾಕೀರ್‌

ಸಾಗರ : ಜೆಡಿಎಸ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚು ಸ್ಥಾನಮಾನ ಸಿಗುತ್ತಿದೆ. ಅನೇಕ ವರ್ಷಗಳಿಂದ ಬೇರೆಬೇರೆ ಪಕ್ಷದಲ್ಲಿ ನಮ್ಮ ಸಮುದಾಯದ ಪ್ರಮುಖರು ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಮ್ಮನ್ನು ಉಪ ಯೋಗಿಸಿಕೊಳ್ಳುತ್ತಿದ್ದಾರೆಯೆ ವಿನಃ ಸ್ಪರ್ಧೆಗೆ ಅವಕಾಶ ಕೊಡುತ್ತಿಲ್ಲ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಸೈಯದ್‌ ಜಾಕೀರ್‌ ತಿಳಿಸಿದರು.

ಗುರುವಾರ ಜೆಡಿಎಸ್‌ ಅಭ್ಯರ್ಥಿಯಾಗಿ ತಮ್ಮ ಬೆಂಬಲಿಗರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ ನಂತರ ಪತ್ರಕರ್ತರ ಜೊತೆ ಮಾತನಾಡಿದ ಅವರು, ದೇವೇಗೌಡರು, ಕುಮಾರಸ್ವಾಮಿ, ಸಿ.ಎಂ.ಇಬ್ರಾಹಿಂ ಇನ್ನಿತರರು ನನ್ನ ಮೇಲೆ ವಿಶ್ವಾಸ ಇರಿಸಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೇಟ್‌ ನೀಡಿದ್ದಾರೆ. ಪಕ್ಷವನ್ನು ಗೆಲ್ಲಿಸುವ ಮೂಲಕ ಅವರ ವಿಶ್ವಾಸ ಉಳಿಸಿ ಕೊಳ್ಳುವ ಪ್ರಯತ್ನ ನಡೆಸುತ್ತೇನೆ ಎಂದು ಹೇಳಿದರು.

ಜೆಡಿಎಸ್‌ ತಾಲ್ಲೂಕು ಅಧ್ಯಕ್ಷ ಕನ್ನಪ್ಪ ಬೆಳಲಮಕ್ಕಿ ಮಾತನಾಡಿ, ವರಿಷ್ಟರು ಸೈಯದ್‌ ಜಾಕೀರ್‌ ಅವರಿಗೆ ಬಿ-ಪಾರಂ ನೀಡಿದ್ದು ಸಂತೋಷ ತಂದಿದೆ. ಅಲ್ಪಸಂಖ್ಯಾತರಿಗೆ ಜೆಡಿಎಸ್‌ನಲ್ಲಿ ಮಾತ್ರ ಅವಕಾಶ ಕೊಡಲಾಗುತ್ತಿದೆ. ಸೈಯದ್‌ ಜಾಕೀರ್‌ ಅವರ ಗೆಲುವಿಗೆ ಎಲ್ಲರೂ ಪ್ರಯತ್ನ ನಡೆಸುತ್ತೇವೆ. ಈ ಚುನಾವಣೆ ತಾಲ್ಲೂಕಿನಲ್ಲಿ ಜೆಡಿಎಸ್‌ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಸಹಕಾರಿಯಾ ಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಯ ಲಕ್ಷ್ಮೀ ನಾರಾಯಣಪ್ಪ, ಎಚ್‌. ಕೆ.ಅಣ್ಣಪ್ಪ, ವೀರಾಪುರ ಗುರು ನಾಥ ಗೌಡ ಹಾಜರಿದ್ದರು.